Amos 5:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ನ್ಯಾಯತೀರ್ಪಿನ ದಿವಸವು ಬೆಳಕಿನ ದಿವಸವಾಗಿರದೆ ಕತ್ತಲೆಯ ದಿವಸವಾಗಿರುವುದು; ಬೆಳಕಿನ ಮಿಣಕೂ ಇಲ್ಲದ ಅಂಧಕಾರದ ದಿನವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!
Kannada BSI Bible 2016
ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ದಿನವು ಕತ್ತಲೆಯೇ ಸರಿ, ಬೆಳಕಲ್ಲವಲ್ಲಾ; ಹೌದು, ಯಾವ ವಿುಣುಕೂ ಇಲ್ಲದ ಗಾಢಾಂಧಕಾರವೇ.
Kannada Bible (KNCL) BSI 2016
ಖಂಡಿತವಾಗಿ ಸ್ವಾಮಿಯ ದಿನ ಬೆಳಕಾಗಿರದು, ಕತ್ತಲೆಯಾಗಿರುತ್ತದೆ, ಒಂದು ಚುಕ್ಕೆಯೂ ಇಲ್ಲದ ಕಾರಿರುಳಂತಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಯೆಹೋವ ದೇವರ ದಿವಸವು ಬೆಳಕಲ್ಲ, ಕತ್ತಲೆಯೇ. ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲೆಯೇ.