Amos 5:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.
Kannada BSI Bible 2016
ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನಗೆ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸೆನು; ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನೋಡೆನು.
Kannada Bible (KNCL) BSI 2016
ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.