Amos 5:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೂ ನೀನು ನಿನ್ನ ರಾಜನಾದ ಸಕ್ಕೂತನ ಮತ್ತು ಕೈವಾನನ ವಿಗ್ರಹಗಳನ್ನು ತೆಗೆದುಕೊಂಡು ಹೋದೆ. ಆ ನಕ್ಷತ್ರಗಳನ್ನು ದೇವರುಗಳನ್ನಾಗಿ ನೀನೇ ಮಾಡಿಕೊಂಡೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು, ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು.
Kannada BSI Bible 2016
ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್‌ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಕ್ಕೂತ್, ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರದೇವತೆಯನ್ನು, ಅಂದರೆ ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವದು;
Kannada Bible (KNCL) BSI 2016
ಆದರೆ ಈಗ ನೀವು ನಿರ್ಮಿಸಿಕೊಂಡಿರುವ ಮೂರ್ತಿಗಳಾದ ಸಿಕ್ಕುತ್ ರಾಜೇಶ್ವರನನ್ನೂ ಕಿಯೂನ್ ಎಂಬ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ನಿಮಗೋಸ್ಕರ ಮಾಡಿಕೊಂಡ ಮೂರ್ತಿಗಳಾದ ಸಿಕ್ಕೊತ್ ಎಂಬ ನಿಮ್ಮ ರಾಜನನ್ನೂ ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.