Amos 5:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ ನೂರು ಮಂದಿಯೊಂದಿಗೆ ಹಿಂದಿರುಗುವರು. ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ ಕೇವಲ ಹತ್ತು ಮಂದಿಯೊಂದಿಗೆ ಹಿಂದಿರುಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”
Kannada BSI Bible 2016
ಕರ್ತನಾದ ದೇವರು ಹೀಗೆ ಹೇಳುತ್ತಾನೆ; ಪಟ್ಟಣದಿಂದ ಸಾವಿರ ಮಂದಿ ಯಾಗಿ ಹೊರಟವರು ನೂರು ಮಂದಿಯಾಗಿ ಉಳಿದು ಇಸ್ರಾಯೇಲಿನ ಮನೆ ಸೇರಲು ನೂರು ಮಂದಿಯಾಗಿ ಹೊರಟವರು ಹತ್ತು ಮಂದಿಯಾಗಿ ಉಳಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಭಟರಲ್ಲಿ ನೂರು ಮಂದಿ ಉಳಿಯುವರು; ಒಂದು ಊರಿನಿಂದ ಹೊರಟ ನೂರು ದಂಡಾಳುಗಳಲ್ಲಿ ಇಸ್ರಾಯೇಲ್ ವಂಶಕ್ಕೆ ಹತ್ತು ಜನ ನಿಲ್ಲುವರು.
Kannada Bible (KNCL) BSI 2016
ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ ಪಟ್ಟಣಕ್ಕೆ ಮರಳಿದವರು ನೂರೇ ಮಂದಿ: ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ ಇಸ್ರಯೇಲಿಗೆ ಮರಳಿದವರು ಹತ್ತೇ ಮಂದಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ, ಪಟ್ಟಣಕ್ಕೆ ಮರಳಿದವರು ನೂರೇ ಮಂದಿ. ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ, ಇಸ್ರಾಯೇಲಿಗೆ ಮರಳಿದವರು ಹತ್ತೇ ಮಂದಿ.”