Amos 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ. (Verses 7-9)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”
Kannada BSI Bible 2016
ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
Kannada BSI JV (ಕನ್ನಡ ಸತ್ಯವೇದವು J.V. (BSI))
ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ,
Kannada Bible (KNCL) BSI 2016
ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ.