Amos 5:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 7
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!
Kannada BSI Bible 2016
ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೃತ್ತಿಕೆಯನ್ನೂ ಮೃಗಶಿರವನ್ನೂ ಸೃಷ್ಟಿಸಿ ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ ಹಗಲನ್ನು ಇರುಳಿಗೆ ಮಾರ್ಪಡಿಸಿ ಸಾಗರದ ಜಲವನ್ನು ಬರಮಾಡಿಕೊಂಡು ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ; ಯೆಹೋವನೆಂಬದೇ ಆತನ ನಾಮಧೇಯ;
Kannada Bible (KNCL) BSI 2016
ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.