Amos 6:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!
Kannada BSI Bible 2016
ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ!
Kannada Bible (KNCL) BSI 2016
ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!