Amos 6:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.”
Kannada BSI Bible 2016
ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರದೇವರಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅದು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ತೊರೆಯ ತನಕ ನಿಮ್ಮನ್ನು ಜಜ್ಜಿಬಿಡುವದು.
Kannada Bible (KNCL) BSI 2016
ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ: “ಎತ್ತಿಕಟ್ಟುವೆನು ನಿಮಗೆ ವಿರುದ್ಧವಾಗಿ ಜನಾಂಗವೊಂದನ್ನು; ಸದೆಬಡಿವುದದು ನಿಮ್ಮನ್ನು ಹಮಾತಿನ ದಾರಿಯಿಂದ ಅರಬಾ ತೊರೆಯ ತನಕ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು.