Amos 6:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ಆ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆ ಒಯ್ಯಲ್ಪಡುವವರಲ್ಲಿ ಮೊದಲಿಗರಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಸೆರೆಗೆ ಒಯ್ಯುವವರ ಮುಂದುಗಡೆಯೇ, ಅವರು ಸೆರೆಗೆ ಹೋಗುವರು, ಮತ್ತು ಭೋಗಮಾಡುವವರ ಹರ್ಷಧ್ವನಿಯು ನಿಂತುಹೋಗುವುದು.
Kannada BSI Bible 2016
ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಸೆರೆಗೆ ಒಯ್ಯಲ್ಪಡುವವರ ಮುಂದುಗಡೆ ಅವರು ಸೆರೆಗೆ ಹೋಗುವರು; ಒರಗಿಕೊಳ್ಳುವವರ ಹರ್ಷಧ್ವನಿಯು ನಿಂತುಹೋಗುವದು.
Kannada Bible (KNCL) BSI 2016
ಆದುದರಿಂದ ಗಡೀಪಾರಾಗುವವರಲ್ಲಿ ನೀವೇ ಮೊದಲಿಗರಾಗುವಿರಿ. ಆಗ ನಿಮ್ಮ ಸುಖಾಸನಗಳು ಮತ್ತು ಆಮೋದ ಪ್ರಮೋದಗಳು ಗತಿಸಿಹೋಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸೆರೆಗೆ ಕರೆದೊಯ್ಯುವವರಲ್ಲಿ ನೀವು ಮೊದಲಿಗರಾಗಿರುವಿರಿ, ಭೋಗ ಮಾಡುವವರ ಹರ್ಷ ಧ್ವನಿಯು ಗತಿಸಿ ಹೋಗುವುದು.