Amos 7:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನನಗೆ ಇದನ್ನು ತೋರಿಸಿದನು: ಎರಡನೇ ಬೆಳೆಯು ಬೆಳೆಯಲಾರಂಭಿಸಿದ ಕಾಲದಲ್ಲಿ ಆತನು ಮಿಡತೆಗಳನ್ನು ತಯಾರು ಮಾಡುತ್ತಿದ್ದನು. ಅರಸನು ಮೊದಲನೇ ಬೆಳೆಯನ್ನು ರಾಶಿಮಾಡಿಸಿಕೊಂಡು ಹೋದ ನಂತರದ ಬೆಳೆ ಇದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.
Kannada BSI Bible 2016
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು - ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಆಹಾ, ಯೆಹೋವನು ವಿುಡತೆಗಳನ್ನು ಉಂಟುಮಾಡಿದನು.
Kannada Bible (KNCL) BSI 2016
ಒಡೆಯರಾದ ಸರ್ವೇಶ್ವರ ನನಗೆ ತೋರಿಸಿದ ದರ್ಶನ ಇದು: ಹಿಂಗಾರು ಮಳೆ ಬಿದ್ದಿತ್ತು. ಪೈರು ಸೊಂಪಾಗಿ ಬೆಳೆಯಲು ಆರಂಭಿಸಿತ್ತು. ಈಗಾಗಲೇ ರಾಜಾದಾಯದ ಹುಲ್ಲಿನ ಕೊಯಿಲು ಮುಗಿದು ಮತ್ತೆ ಹುಲ್ಲು ಬೆಳೆಯುತ್ತಿತ್ತು. ಆಗ ಸರ್ವೇಶ್ವರ ಮಿಡತೆಗಳ ಗುಂಪೊಂದನ್ನು ಹೊರಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಹಿಂಗಾರು ಮಳೆ ಬಿದ್ದು, ಪೈರು ಸೊಂಪಾಗುವುದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ, ಬೆಳೆಯು ವೃದ್ಧಿಯಾಗುತ್ತಿದ್ದಾಗ, ಇಗೋ ಯೆಹೋವ ದೇವರು, ಮಿಡತೆಗಳನ್ನು ಉಂಟುಮಾಡಿದರು.