Amos 7:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.
Kannada BSI Bible 2016
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ - ಆಮೋಸನು ಇಸ್ರಾಯೇಲ್ಯರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚುಮಾಡಿದ್ದಾನೆ; ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು;
Kannada Bible (KNCL) BSI 2016
ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.