Amos 7:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ, “ಭವಿಷ್ಯವಾದಿಯೇ, ನೀನು ಯೆಹೂದಕ್ಕೆ ಹೋಗಿ ಅಲ್ಲಿ ನಿನ್ನ ಹೊಟ್ಟೆ ತುಂಬಿಸಿಕೊ. ನಿನ್ನ ಪ್ರಸಂಗವನ್ನು ಅಲ್ಲಿಯೇ ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿತಿಂದು ಪ್ರವಾದಿಸು.
Kannada BSI Bible 2016
ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅಮಚ್ಯನು ಆಮೋಸನಿಗೆ - ಕಣಿಯವನೇ, ನಡೆ, ಯೆಹೂದದೇಶಕ್ಕೆ ಓಡಿಹೋಗು; ಅಲ್ಲೇ ಪ್ರವಾದನೆಮಾಡುತ್ತಾ ಹೊಟ್ಟೆಹೊರಕೋ;
Kannada Bible (KNCL) BSI 2016
ಆ ಬಳಿಕ ಅಮಚ್ಯನು ಆಮೋಸನಿಗೆ, “ಕಣಿಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿಹೋಗು; ಅಲ್ಲಿ ಪ್ರವಾದನೆಮಾಡಿ ಹೊಟ್ಟೆ ಹೊರೆದುಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ: “ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿ ದುಡಿದು ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.