Amos 7:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
Kannada BSI Bible 2016
ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ - ನಾನು ಪ್ರವಾದಿಯಲ್ಲ, ಪ್ರವಾದಿ ಮಂಡಲಿಗೆ ಸೇರಿದವನೂ ಅಲ್ಲ, ನಾನು ಗೊಲ್ಲನು, ಅತ್ತಿಹಣ್ಣು ಕೀಳುವವನು;
Kannada Bible (KNCL) BSI 2016
ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.