Amos 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಕುರಿಕಾಯುತ್ತಿರುವಾಗ ಯೆಹೋವನು ನನ್ನನ್ನು ಕುರಿಗಳ ಹಿಂದೆ ಹೋಗಬೇಡ ಎಂದು ಕರೆದನು. ಆತನು ನನಗೆ, ‘ನನ್ನ ಜನರಾದ ಇಸ್ರೇಲರ ಬಳಿಗೆ ಹೋಗಿ ಪ್ರವಾದಿಸು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನ್ನನ್ನು ಮಂದೆ ಕಾಯುವವರಿಂದ ತಪ್ಪಿಸಿ, ‘ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು’ ಎಂದು ನನಗೆ ಅಪ್ಪಣೆ ಕೊಟ್ಟನು.
Kannada BSI Bible 2016
ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನ್ನನ್ನು ಮಂದೆಕಾಯುವದರಿಂದ ತಪ್ಪಿಸಿ - ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದನೆಮಾಡು ಎಂದು ನನಗೆ ಅಪ್ಪಣೆಕೊಟ್ಟನು.
Kannada Bible (KNCL) BSI 2016
ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”