Amos 7:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,
Kannada BSI Bible 2016
ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ಯೆಹೋವನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ವಿರುದ್ಧವಾಗಿ ಪ್ರವಾದನೆ ಮಾಡಬೇಡ, ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯೆತ್ತಬೇಡ ಎಂದು ನೀನು ಹೇಳಿದ ಕಾರಣ
Kannada Bible (KNCL) BSI 2016
“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.