Amos 7:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಿಡತೆಗಳು ದೇಶದ ಎಲ್ಲಾ ಹುಲ್ಲನ್ನು ತಿಂದುಬಿಟ್ಟವು. ಆ ಬಳಿಕ ನಾನು ಹೇಳಿದ್ದೇನೆಂದರೆ, “ನನ್ನ ಒಡೆಯನಾದ ಯೆಹೋವನೇ, ನಮ್ಮನ್ನು ಕ್ಷಮಿಸು. ಯಾಕೋಬನು ತೀರಾ ದುರ್ಬಲನಾಗಿರುವದರಿಂದ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಅವನಿಗಾಗಿ ನಾನು ನಿನ್ನನ್ನು ಬೇಡುತ್ತೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.
Kannada BSI Bible 2016
ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ದೇಶದ ಪೈರುಪಚ್ಚೆಯನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು - ಕರ್ತನಾದ ಯೆಹೋವನೇ, ಲಾಲಿಸು, ಕ್ಷವಿುಸು; ಯಾಕೋಬು ಹೇಗೆ ನಿಂತೀತು, ಅದು ಚಿಕ್ಕ ಜನಾಂಗ ಎಂದು ವಿಜ್ಞಾಪಿಸಲು
Kannada Bible (KNCL) BSI 2016
ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.