Amos 7:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.
Kannada BSI Bible 2016
ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇನ್ನೊಂದನ್ನು ನನಗೆ ತೋರಿಸಿದನು - ಆಹಾ, ಕರ್ತನಾದ ಯೆಹೋವನು ತನ್ನ ಪಕ್ಷವಾಗಿ ವ್ಯಾಜ್ಯವಾಡುವದಕ್ಕೆ ಅಗ್ನಿಯನ್ನು ಕರೆದನು.
Kannada Bible (KNCL) BSI 2016
ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.