Amos 8:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, “ನಿಮ್ಮ ದೇಶದಲ್ಲಿ ಹಸಿವೆಯ ದಿವಸಗಳನ್ನು ಬರಮಾಡುವೆನು. ಜನರು ರೊಟ್ಟಿಗಾಗಿ ಹಸಿಯುವುದಿಲ್ಲ. ನೀರಿಗಾಗಿ ಬಾಯಾರುವದಿಲ್ಲ. ಇಲ್ಲ! ಜನರು ಯೆಹೋವನ ವಾಕ್ಯಕ್ಕಾಗಿ ಹಸಿವೆಯುಳ್ಳವರಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.
Kannada BSI Bible 2016
ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತಿವೆ; ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.
Kannada Bible (KNCL) BSI 2016
ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ದಿನಗಳು ಬರಲಿವೆ. ಅಂದು ನಾಡಿನಲ್ಲಿ ಕ್ಷಾಮವನ್ನುಂಟುಮಾಡುವೆನು. ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವೂ ಅಲ್ಲ; ಸರ್ವೇಶ್ವರನ ಸಂದೇಶಕ್ಕಾಗಿ ಹಸಿದು ಹಂಬಲಿಸುವ ಕ್ಷಾಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಿನಗಳು ಬರುವುವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ. ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ.