Amos 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೃತ್ಯುಸಮುದ್ರದಿಂದ ಮೆಡಿಟರೇನಿಯನ್ ಸಮುದ್ರದ ತನಕ, ಉತ್ತರದಿಂದ ಪೂರ್ವದಿಕ್ಕಿನ ತನಕ ಜನರು ಯೆಹೋವನ ಸಂದೇಶಕ್ಕಾಗಿ ಹಾತೊರೆಯುತ್ತಾ ಅಲೆದಾಡುವರು. ಆದರೆ ಅವರು ಕಂಡುಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ.
Kannada BSI Bible 2016
ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುದ್ರದಿಂದ ಸಮುದ್ರಕ್ಕೆ, ಬಡಗಲಿಂದ ಮೂಡಲಿಗೆ ಬಳಲುತ್ತಾ ಹೋಗುವರು, ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು; ಆದರೂ ಅದು ಸಿಕ್ಕದು.
Kannada Bible (KNCL) BSI 2016
ಜನರು ಸಮುದ್ರದಿಂದ ಸಮುದ್ರದವರೆಗೆ ಉತ್ತರದಿಂದ ಪೂರ್ವದವರೆಗೆ ಅತ್ತಿತ್ತ ಹುಡುಕುತ್ತಾ ಬಳಲಿಹೋಗುವರು. ಆದರೂ ಅದು ಸಿಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಸಮುದ್ರದಿಂದ ಸಮುದ್ರಕ್ಕೂ, ಉತ್ತರದಿಂದ ಪೂರ್ವಕ್ಕೂ ಅಲೆದು ಯೆಹೋವ ದೇವರ ವಾಕ್ಯವನ್ನು ಹುಡುಕುವುದಕ್ಕೆ ಅತ್ತಿತ್ತ ಓಡಾಡಿ, ಅದನ್ನು ಕಾಣದೆ ಹೋಗುವರು.