Amos 8:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”
Kannada BSI Bible 2016
ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಸೌಧಗಳ ಕೀರ್ತನೆಗಳು ಕಿರಚಾಟವಾಗುವವು; ಇದು ಕರ್ತನಾದ ಯೆಹೋವನ ನುಡಿ; ಆಗ ಹೆಣಗಳು ಹೆಚ್ಚುವವು; ಅವುಗಳನ್ನು ಎಲ್ಲೆಲ್ಲಿಯೂ ಮೌನವಾಗಿ ಬಿಸಾಟುಬಿಡುವರು; ಉಸಿರಾಡದಿರ್ರಿ!
Kannada Bible (KNCL) BSI 2016
ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”