Amos 8:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ ಅವರನ್ನು ನಾವು ಗುಲಾಮರನ್ನಾಗಿ ತೆಗೆದುಕೊಳ್ಳೋಣ. ಒಂದು ಜೊತೆ ಚಪ್ಪಲಿಯ ಕ್ರಯಕೊಟ್ಟು ಅವರನ್ನು ಖರೀದಿಸೋಣ. ಮತ್ತು ನೆಲದಲ್ಲಿ ಬಿದ್ದ ಗೋದಿಯನ್ನು ಒಟ್ಟುಗೂಡಿಸಿ ಮಾರೋಣ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!
Kannada BSI Bible 2016
ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
Kannada BSI JV (ಕನ್ನಡ ಸತ್ಯವೇದವು J.V. (BSI))
ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ದೇಶದ ದರಿದ್ರರನ್ನು ನಿರ್ಮೂಲ ಮಾಡುವವರೇ, ಕೇಳಿರಿ!
Kannada Bible (KNCL) BSI 2016
ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ,” ಎಂದುಕೊಳ್ಳುತ್ತೀರಿ, ಅಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.”