Amos 8:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
Kannada BSI Bible 2016
ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ - ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವದನ್ನೂ ಎಂದಿಗೂ ಮರೆತುಬಿಡೆನು.
Kannada Bible (KNCL) BSI 2016
ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.