Amos 9:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.
Kannada BSI Bible 2016
ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವದನ್ನು ಕಂಡೆನು; ಆತನು ಹೀಗೆ ಅಪ್ಪಣೆಕೊಟ್ಟನು - ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ; ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳಿಸು; ಉಳಿದವರನ್ನು ಖಡ್ಗದಿಂದ ಸಂಹರಿಸುವೆನು; ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.
Kannada Bible (KNCL) BSI 2016
ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: “ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ.