Amos 9:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
Kannada BSI Bible 2016
ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.