Amos 9:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದುಬರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.
Kannada BSI Bible 2016
ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಆಹಾ, ಮುಂದಿನ ಕಾಲದಲ್ಲಿ ಉಳುವವನು ಕೊಯ್ಯುವವನ ಹಿಂದೆ, ದ್ರಾಕ್ಷೆತುಳಿಯುವವನು ಬಿತ್ತುವವನ ಹಿಂದೆ ಒತ್ತಿಕೊಂಡು ಹೋಗುವರು; ಬೆಟ್ಟಗಳು ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುತ್ತವೋ ಎಂಬಂತಿರುವವು.
Kannada Bible (KNCL) BSI 2016
ಕಾಲ ಬರುವುದು: ಆಗ - ಹೊಸ ಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” “ಆಗ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, ಗುಡ್ಡಗಳೆಲ್ಲಾ ಕರಗುವುವು.