Amos 9:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದುಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದುಹಾಕುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು.
Kannada BSI Bible 2016
ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾತಾಳದವರೆಗೆ ತೋಡಿಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು; ಸ್ವರ್ಗದ ತನಕ ಹತ್ತಿದರೇನು, ಅಲ್ಲಿಂದಲೂ ಅವರನ್ನಿಳಿಸುವೆನು;
Kannada Bible (KNCL) BSI 2016
ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.