Amos 9:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶತ್ರುಗಳು ಅವರನ್ನು ಸೆರೆಹಿಡಿದರೆ ನಾನು ಅವರನ್ನು ಕೊಂದುಹಾಕಲು ಕತ್ತಿಗೆ ಆಜ್ಞಾಪಿಸುವೆನು. ಹೌದು ನಾನು ಅವರನ್ನು ಗಮನಿಸುತ್ತಾ ಕಾಯುವೆನು. ಅವರಿಗೆ ಒಳ್ಳೆಯದು ಮಾಡುವುದಕ್ಕಾಗಿ ಅಲ್ಲ. ಅವರಿಗೆ ಸಂಕಟ ಕೊಡುವುದಕ್ಕಾಗಿ ಅವರನ್ನು ಕಾಯುತ್ತೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”
Kannada BSI Bible 2016
ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶತ್ರುವಶವಾಗಿ ಸೆರೆಗೆ ಹೋದರೂ ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವದು; ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.
Kannada Bible (KNCL) BSI 2016
ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.”