Amos 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಇಥಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕೀರ್‌ನಿಂದ ಅರಾಮ್ಯರನ್ನು ತಂದೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?
Kannada BSI Bible 2016
ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೋ; ನಾನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ, ಫಿಲಿಷ್ಟಿಯರನ್ನು ಕಫ್ತೋರಿನಿಂದ, ಅರಾಮ್ಯರನ್ನು ಕೀರಿನಿಂದ [ಏಕ ರೀತಿಯಾಗಿ] ಬರಮಾಡಲಿಲ್ಲವೇ?
Kannada Bible (KNCL) BSI 2016
“ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.