Amos 9:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು” ಇದು ಯೆಹೋವನ ನುಡಿ.
Kannada BSI Bible 2016
ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಕರ್ತನಾದ ಯೆಹೋವನೆಂಬ ನಾನು ಪಾಪಮಯರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಅದನ್ನು ಭೂಮಂಡಲದೊಳಗಿಂದ ನಾಶಮಾಡುವೆನು; ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು. ಇದು ಯೆಹೋವನ ನುಡಿ.
Kannada Bible (KNCL) BSI 2016
ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರ್ವಭೌಮ ಯೆಹೋವ ದೇವರ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲೆ ಇವೆ. ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.