Colossians 1:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.
Kannada BSI Bible 2016
ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭೆಯೆಂಬ ದೇಹಕ್ಕೆ ಆತನು ಶಿರಸ್ಸು; ಆತನು ಆದಿಸಂಭೂತನು. ಎಲ್ಲಾದರಲ್ಲಿ ಪ್ರಮುಖನಾಗುವಂತೆ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.
Kannada Bible (KNCL) BSI 2016
ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.