Colossians 1:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿ ನಂಬಿಗಸ್ತರಾದ ಮತ್ತು ಪವಿತ್ರರಾದ ಸಹೋದರ, ಸಹೋದರಿಯರಿಗೆ ನಾನು ಈ ಪತ್ರವನ್ನು ನಮ್ಮ ಸಹೋದರನಾದ ತಿಮೊಥೆಯನ ಜೊತೆಗೂಡಿ ಬರೆಯುತ್ತಿದ್ದೇನೆ. ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರಕಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.
Kannada BSI Bible 2016
ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿರುವ ನಂಬಿಗಸ್ತರಾದ ಸಹೋದರರಿಗೆ ಬರೆಯುವದೇನಂದರೆ - ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
Kannada Bible (KNCL) BSI 2016
ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ: ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.