Colossians 1:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಸಭೆಗೆ ಸೇವಕನಾದೆನು. ಏಕೆಂದರೆ ದೇವರು ನನಗೆ ವಿಶೇಷವಾದ ಕಾರ್ಯವನ್ನು ಮಾಡುವಂತೆ ಆಜ್ಞಾಪಿಸಿದನು. ಈ ಕಾರ್ಯವು ನಿಮಗೆ ಸಹಾಯ ಮಾಡುವುದು. ದೇವರ ಉಪದೇಶವನ್ನು ಸಂಪೂರ್ಣವಾಗಿ ತಿಳಿಸುವುದೇ ಆ ಕಾರ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.
Kannada BSI Bible 2016
ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕೆಲಸವನ್ನು ನಿಮ್ಮ ಪ್ರಯೋಜನಕ್ಕೋಸ್ಕರ ನನಗೆ ದಯಪಾಲಿಸಿದನು.
Kannada Bible (KNCL) BSI 2016
ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೋಸ್ಕರವಾಗಿ ನನಗೆ ದೇವರು ಕೊಟ್ಟಿರುವ ಜವಾಬ್ದಾರಿಗೆ ಅನುಸಾರವಾಗಿ, ದೇವರ ವಾಕ್ಯವನ್ನು ಸಂಪೂರ್ಣವಾಗಿ ಸಾರಲು ನಾನು ಸಭೆಗೆ ಸೇವಕನಾದೆನು.