Colossians 1:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.
Kannada BSI Bible 2016
ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.
Kannada Bible (KNCL) BSI 2016
ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.