Colossians 1:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.
Kannada BSI Bible 2016
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.
Kannada Bible (KNCL) BSI 2016
ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.