Colossians 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯೇ ದೇವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
Kannada BSI Bible 2016
ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ದೇವಜನರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿ ಪರಲೋಕದಲ್ಲಿ ನಿಮಗೋಸ್ಕರ ಸಿದ್ಧವಾಗಿರುವ ಮಹಾಪದವಿಯನ್ನು ನೆನಸುತ್ತಾ ನಾವು ಪ್ರಾರ್ಥನೆಮಾಡುವಾಗೆಲ್ಲಾ ನಿಮ್ಮ ನಿವಿುತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಸ್ತೋತ್ರಮಾಡುತ್ತೇವೆ. ನೀವು ಆ ಪದವಿಯನ್ನು ಕುರಿತು ನಿಮ್ಮ ಬಳಿಗೆ ಬಂದಿರುವ ಸುವಾರ್ತೆಯ ಸತ್ಯವಾಕ್ಯದಿಂದ ಮೊದಲೇ ಕೇಳಿದಿರಿ.
Kannada Bible (KNCL) BSI 2016
ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ನಿಮಗಾಗಿ ಪ್ರಾರ್ಥನೆ ಮಾಡುವಾಗ, ನಮ್ಮ ಕರ್ತ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.