Colossians 1:5 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ. (Verses 5-6)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.
Kannada BSI Bible 2016
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
Kannada Bible (KNCL) BSI 2016
ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ.