Colossians 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಎಪಫ್ರನಿಂದ ದೇವರ ಕೃಪೆಯ ಬಗ್ಗೆ ತಿಳಿದುಕೊಂಡಿರಿ. ಅವನು ನಮ್ಮ ಜೊತೆಯಲ್ಲಿಯೇ ಸೇವೆ ಮಾಡುತ್ತಿದ್ದಾನೆ. ನಾವು ಅವನನ್ನು ಪ್ರೀತಿಸುತ್ತೇವೆ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತ ಸೇವಕನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.
Kannada BSI Bible 2016
ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಆ ಸತ್ಯೋಪದೇಶವನ್ನು ಕಲಿತುಕೊಂಡಿರಿ. ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
Kannada Bible (KNCL) BSI 2016
ಈ ಶುಭಸಂದೇಶವನ್ನು ಕ್ರಿಸ್ತಯೇಸುವಿನ ನಂಬಿಕಸ್ಥ ದಾಸನೂ ನಮ್ಮ ಜೊತೆಯ ಸೇವಕನೂ ಆದ ಎಪಫ್ರನಿಂದ ಕಲಿತುಕೊಂಡಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ನೀವು ನಮ್ಮ ಪ್ರೀತಿಯ ಜೊತೆ ಸೇವಕನಾದ ಎಪಫ್ರನಿಂದ ಕಲಿತುಕೊಂಡಿರಿ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.