Colossians 2:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.
Kannada BSI Bible 2016
ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಎಲ್ಲಾ ದೊರೆತನಗಳಿಗೂ ಅಧಿಕಾರಿಗಳಿಗೂ ಶಿರಸ್ಸು. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದಿರಿ; ಈ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಇದು ಪಾಪಾಧೀನಸ್ವಭಾವವನ್ನು ವಿಸರ್ಜಿಸುವದೇ; ಇದೇ ಕ್ರಿಸ್ತೀಯ ಸುನ್ನತಿ;
Kannada Bible (KNCL) BSI 2016
ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.