Colossians 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ. ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.
Kannada BSI Bible 2016
ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದೊರೆತನಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಜಯೋತ್ಸವ ಮಾಡುತ್ತಾನೋ ಎಂಬಂತೆ ಶಿಲುಬೆಯ ಮೇಲೆ ಅವುಗಳನ್ನು ಜಯಿಸಲ್ಪಟ್ಟವುಗಳನ್ನಾಗಿ ಮೆರಸುತ್ತಾ ತೋರಿಸಿದನು.
Kannada Bible (KNCL) BSI 2016
ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.