Colossians 2:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್‌ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.
Kannada BSI Bible 2016
ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು.
Kannada Bible (KNCL) BSI 2016
ಹೀಗಿರಲಾಗಿ, ತಿಂಡಿತೀರ್ಥದ ವಿಷಯದಲ್ಲಾಗಲಿ, ಹಬ್ಬಹುಣ್ಣಿಮೆಗಳ ವಿಚಾರದಲ್ಲಾಗಲಿ, ಸಬ್ಬತ್‍ದಿನವನ್ನು ಆಚರಿಸುವ ರೀತಿಯಲ್ಲಾಗಲಿ ನಿಮ್ಮನ್ನು ದೋಷಿಗಳೆಂದು ಯಾರೂ ದೂರದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ.