Colossians 2:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.
Kannada BSI Bible 2016
ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,
Kannada Bible (KNCL) BSI 2016
ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.