Colossians 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.
Kannada BSI Bible 2016
ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.
Kannada Bible (KNCL) BSI 2016
ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.