Colossians 2:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ನಿಯಮಗಳು ನೋಡುವುದಕ್ಕೆ ಬದ್ಧಿಯುಳ್ಳವಾಗಿವೆ. ಆದರೆ ಅತಿವಿನಯವಂತರಂತೆ ನಟಿಸಲು ಮತ್ತು ತಮ್ಮ ದೇಹಗಳನ್ನು ದಂಡಿಸಲು ಜನರನ್ನು ಪ್ರೆರೇಪಿಸುವ ಅವುಗಳು ಕೇವಲ ಮಾನವ ನಿರ್ಮಿತವಾದ ಧರ್ಮದ ಒಂದು ಭಾಗವಾಗಿವೆ. ಆದರೆ ಪಾಪಸ್ವಭಾವವು ಇಚ್ಛಿಸುವ ದುಷ್ಕೃತ್ಯಗಳನ್ನು ಮಾಡದಂತೆ ಅವು ಜನರಿಗೆ ಯಾವ ಸಹಾಯವನ್ನೂ ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.
Kannada BSI Bible 2016
ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥ ಉಪದೇಶಗಳು ಸ್ವಕಲ್ಪಿತಾಚಾರವನ್ನೂ ಅತಿವಿನಯವನ್ನೂ ದೇಹದಂಡನೆಯನ್ನೂ ಬೋಧಿಸುತ್ತಾ ಹೆಸರಿಗೆ ಮಾತ್ರ ಜ್ಞಾನವೆನಿಸಿಕೊಳ್ಳುತ್ತವೆಯಲ್ಲದೆ ಶಾರೀರಿಕ ಇಚ್ಫೆಗಳನ್ನು ನಿಗ್ರಹಿಸುವದರಲ್ಲಿ ಯಾವ ಪ್ರಯೋಜನಕ್ಕೂ ಬರುವದಿಲ್ಲ.
Kannada Bible (KNCL) BSI 2016
ಸ್ವಕಲ್ಪಿತ ಆಚಾರವಿಧಿಗಳಿಂದಲೂ ಕಪಟ ವಿನಯದಿಂದಲೂ ಕಠಿಣ ದೇಹದಂಡನೆಯಿಂದಲೂ ಕೂಡಿರುವ ಈ ವಿಧಿನಿಯಮಗಳು ಹೊರನೋಟಕ್ಕೆ ಜಾಣ್ಮೆಯುಳ್ಳದಾಗಿ ಕಾಣಬಹುದು. ಆದರೂ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಇವುಗಳು ಪ್ರಯೋಜನಕ್ಕೆ ಬರುವಂಥವುಗಳಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥ ಉಪದೇಶಗಳು ತಾವೇ ತಂದುಕೊಂಡ ಆರಾಧನೆಯಲ್ಲಿಯೂ ಸುಳ್ಳು ದೀನತ್ವದಲ್ಲಿಯೂ ದೇಹದಂಡನೆಯಲ್ಲಿಯೂ ಜ್ಞಾನದ ತೋರಿಕೆಯುಳ್ಳದ್ದಾಗಿರುವುದು ನಿಜವೇ. ಆದರೆ ಇವು ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಪ್ರಯೋಜನವಿಲ್ಲದವುಗಳಾಗಿವೆ.