Colossians 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.
Kannada BSI Bible 2016
ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನಬೋಧೆಯಿಂದ ನಿಮ್ಮ ಮನಸ್ಸನ್ನು ಕೆಡಿಸಿ ನಿಮ್ಮನ್ನು ವಶಮಾಡಿಕೊಂಡಾರು, ಎಚ್ಚರಿಕೆಯಾಗಿರ್ರಿ.
Kannada Bible (KNCL) BSI 2016
ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.