Colossians 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಕ್ರಿಸ್ತನ ಜೊತೆಯಲ್ಲಿ ಜೀವಂತನಾಗಿ ಎದ್ದುಬಂದಿರುವುದರಿಂದ ಪರಲೋಕದವುಗಳನ್ನು ಪಡೆಯಲು ಪ್ರಯತ್ನಿಸಿರಿ. ಕ್ರಿಸ್ತ ಯೇಸು ಪರಲೋಕದಲ್ಲಿ ದೇವರ ಬಲಗಡೆ ಆಸನಾರೂಢನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
Kannada BSI Bible 2016
ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವದರಿಂದ ಮೇಲಿರುವವುಗಳನ್ನು ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.
Kannada Bible (KNCL) BSI 2016
ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕ್ರಿಸ್ತನೊಂದಿಗೆ ಜೀವಂತವಾಗಿ ಎದ್ದವರಾಗಿದ್ದರೆ, ಮೇಲಿರುವವುಗಳನ್ನೇ ಹುಡುಕಿರಿ. ಅಲ್ಲಿ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.