Colossians 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
Kannada BSI Bible 2016
ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
Kannada Bible (KNCL) BSI 2016
ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.