Colossians 3:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಬೇರೆಯವರ ಮೇಲೆ ಹೇಳುವಂಥ ದೂರುಗಳು ನಿಮ್ಮಲ್ಲಿದ್ದರೂ ಕ್ಷಮಿಸಿಬಿಡಿರಿ. ಪ್ರಭುವು ನಿಮ್ಮನ್ನು ಕ್ಷಮಿಸಿದ್ದರಿಂದ ನೀವೂ ಇತರರನ್ನು ಕ್ಷಮಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.
Kannada BSI Bible 2016
ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ.
Kannada Bible (KNCL) BSI 2016
ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.