Colossians 3:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
Kannada BSI Bible 2016
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.
Kannada Bible (KNCL) BSI 2016
ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.