Colossians 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ. ಇದು ಪ್ರಭುವಿನಲ್ಲಿ ನೀವು ಮಾಡುವ ಯೋಗ್ಯ ಕಾರ್ಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
Kannada BSI Bible 2016
ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ; ಇದು ಕರ್ತನಲ್ಲಿರುವವರಿಗೆ ಯೋಗ್ಯವಾಗಿದೆ.
Kannada Bible (KNCL) BSI 2016
ಮಹಿಳೆಯರೇ, ನಿಮ್ಮ ನಿಮ್ಮ ಪತಿಯರಿಗೆ ಪ್ರಭು ಮೆಚ್ಚುವಂತೆ ತಗ್ಗಿ ನಡೆದುಕೊಳ್ಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಂಡತಿಯರೇ, ನೀವು ಕರ್ತ ಯೇಸುವಿನಲ್ಲಿ ಯೋಗ್ಯರಾಗಿರುವಂತೆ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.