Colossians 3:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವಿನಿಂದಲೇ ನಿಮಗೆ ಪ್ರತಿಫಲ ದೊರೆಯುತ್ತದೆ ಎಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಆತನು ತನ್ನ ಜನರಿಗೆ ಮಾಡಿದ ವಾಗ್ದಾನವು ನಿಮ್ಮ ನೆನಪಿನಲ್ಲಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.
Kannada BSI Bible 2016
ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಿಂದ ಪರಲೋಕ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವೆವೆಂದು ತಿಳಿದಿದ್ದೀರಲ್ಲಾ. ನೀವು ಕರ್ತನಾದ ಕ್ರಿಸ್ತನಿಗೇ ದಾಸರಾಗಿದ್ದೀರಿ.
Kannada Bible (KNCL) BSI 2016
ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.